Home Bibles 1 ದಿನವೃತ್ತಾಂತ 1:44 · ಕನ್ನಡ ಬೈಬಲ್
1 ದಿನವೃತ್ತಾಂತ 1:44 · ಕನ್ನಡ ಬೈಬಲ್

ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು.

Cross references

ಯೆಶಾಯ 34:6

ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.

ಯೆಶಾಯ 63:1

ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.

ಯೆರೆಮಿಯ 49:13

ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.

ಆಮೋಸ 1:12

ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.

ಮೀಕ 2:12

ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.

Interlinear

Choose Theme