ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು.
Cross references
ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು;
ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು.
ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್ ತಗ್ಗಿನಲ್ಲಿ ಇಳಿ ದಿತ್ತು.
ಇವನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿ ಯಾಗಿದ್ದು ಆ ಮೂವತ್ತು ಮಂದಿಗಿಂತ ಮೇಲಾದವನಾ ಗಿದ್ದನು ಮತ್ತು ಯೆರೆವಿಾಯನು, ಯಹಜೀಯೇಲನು ಯೋಹನಾನು, ಗೆದೇರಾದವನಾದ ಯೋಜಾಬಾ ದನು,
ಆಗ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳಿದುಕೊಂಡರು.
ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.