ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
Cross references
ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು.
ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು
ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.
ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ?