Home Bibles 1 ದಿನವೃತ್ತಾಂತ 11:20 · ಕನ್ನಡ ಬೈಬಲ್
1 ದಿನವೃತ್ತಾಂತ 11:20 · ಕನ್ನಡ ಬೈಬಲ್

ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.

Cross references

1 ಸಮುವೇಲ 26:6

ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.

2 ಸಮುವೇಲ 2:18

ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.

2 ಸಮುವೇಲ 3:30

ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.

2 ಸಮುವೇಲ 18:2

ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.

2 ಸಮುವೇಲ 20:6

ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.

2 ಸಮುವೇಲ 21:17

ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.

2 ಸಮುವೇಲ 23:18

ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.

1 ದಿನವೃತ್ತಾಂತ 2:16

ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.

Interlinear

Choose Theme