ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
Cross references
ಅವನು ಕಿರ್ಯತ್ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು.
ಇಸ್ರಾಯೇಲ್ ಮನು ಷ್ಯರು--ಏರಿ ಬಂದ ಈ ಮನುಷ್ಯನನ್ನು ನೋಡಿ ದಿರೋ? ಇಸ್ರಾಯೇಲನ್ನು ಹೀಯಾಳಿಸಲು ಏರಿ ಬಂದಿದ್ದಾನಲ್ಲಾ. ಯಾವನು ಇವನನ್ನು ಕೊಂದುಬಿಡು ವನೋ ಅವನನ್ನು ಅರಸನು ಬಹಳ ಐಶ್ವರ್ಯ ವಂತನಾಗ ಮಾಡಿ ಅವನಿಗೆ ತನ್ನ ಮಗಳನ್ನು ಕೊಟ್ಟು ಅವನ ತಂದೆಯ ಮನೆಯನ್ನು ಇಸ್ರಾಯೇಲ್ಯರಲ್ಲಿ ಸರ್ವ ಮಾನ್ಯವನ್ನು ಕೊಡುವನು ಅಂದರು.
ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.
ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು?