ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿ
Cross references
ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು.
ಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ.
ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.
ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು.
ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು.
ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು
ಅವರು ಓಡಿಹೋದರೆಂದೂ ಸೌಲನೂ ಅವನ ಕುಮಾರರೂ ಸತ್ತರೆಂದೂ ತಗ್ಗಿನಲ್ಲಿದ್ದ ಇಸ್ರಾಯೇಲ್ ಜನರೆಲ್ಲರೂ ಕಂಡಾಗ ಅವರು ತಮ್ಮ ಪಟ್ಟಣ ಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.
ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
ಇದಲ್ಲದೆ ದಾವೀದನು ಆರೋನನ ಮಕ್ಕಳನ್ನೂ ಲೇವಿಯರನ್ನೂ ಬರಮಾಡಿದನು.
ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ.
ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸು ವದಕ್ಕೆ ಕ್ರಿಸ್ತನಲ್ಲಿ ನನಗೆ ಬಹು ಧೈರ್ಯವಿದ್ದರೂ ಹಾಗೆ ಆಜ್ಞಾಪಿಸದೆ