ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ
Cross references
ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್ ಮಕ್ಕಳ ಬಳಿಯಲ್ಲಿತ್ತು.
ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.
ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು.
ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು.
ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.