Home Bibles ☰ Books 1 ದಿನವೃತ್ತಾಂತ 14:10 · ಕನ್ನಡ ಬೈಬಲ್
1 ದಿನವೃತ್ತಾಂತ 14:10 · ಕನ್ನಡ ಬೈಬಲ್

ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.

Cross references

ನ್ಯಾಯಾಧಿಪತಿಗಳು 4:6

ಅವಳು ಕೆದೆಷ್‌ ನಫ್ತಾಲಿಯಲ್ಲಿರುವ ಅಬೀನೋವ ಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನ ಸಂಗಡ--ನಿನಗೆ ಇಸ್ರಾಯೇಲ್‌ ದೇವರಾದ ಕರ್ತನು ಆಜ್ಞಾಪಿಸಿದ್ದೇನಂದರೆ--ನೀನು ನಫ್ತಾಲಿಯ ಮಕ್ಕಳ ಲ್ಲಿಯೂ ಜೆಬುಲೂನನ ಮಕ್ಕಳಲ್ಲಿಯೂ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್‌ ಬೆಟ್ಟಕ್ಕೆ ಹೋಗು.

1 ಸಮುವೇಲ 23:2

ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.

1 ಸಮುವೇಲ 23:4

ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.

1 ಸಮುವೇಲ 23:9

ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.

1 ಸಮುವೇಲ 30:8

ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.

2 ಸಮುವೇಲ 2:1

ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.

2 ಸಮುವೇಲ 5:19

ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.

2 ಸಮುವೇಲ 5:23

ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.

1 ಅರಸುಗಳು 22:6

ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.

1 ಅರಸುಗಳು 22:15

ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.

1 ದಿನವೃತ್ತಾಂತ 13:3

ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ

1 ದಿನವೃತ್ತಾಂತ 14:14

ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ--ನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು.

ಸಾಮೇತಿಗಳು 3:6

ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.

Interlinear

Choose Theme