Home Bibles 1 ದಿನವೃತ್ತಾಂತ 15:4 · ಕನ್ನಡ ಬೈಬಲ್
1 ದಿನವೃತ್ತಾಂತ 15:4 · ಕನ್ನಡ ಬೈಬಲ್

ಇದಲ್ಲದೆ ದಾವೀದನು ಆರೋನನ ಮಕ್ಕಳನ್ನೂ ಲೇವಿಯರನ್ನೂ ಬರಮಾಡಿದನು.

Cross references

ನಿರ್ಗಮಕಾಂಡ 6:16

ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್‌ ಕೆಹಾತ್‌ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು.

ಅಂಕೆಗಳ ಪುಸ್ತಕ 3:4

ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.

1 ದಿನವೃತ್ತಾಂತ 6:16

ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು.

1 ದಿನವೃತ್ತಾಂತ 6:49

ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.

1 ದಿನವೃತ್ತಾಂತ 12:26

ಲೇವಿಯ ಮಕ್ಕ ಳಲ್ಲಿ ನಾಲ್ಕು ಸಾವಿರದ ಆರುನೂರು ಮಂದಿ.

1 ದಿನವೃತ್ತಾಂತ 13:2

ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿ

Interlinear

Choose Theme