Home Bibles 1 ದಿನವೃತ್ತಾಂತ 16:2 · ಕನ್ನಡ ಬೈಬಲ್
1 ದಿನವೃತ್ತಾಂತ 16:2 · ಕನ್ನಡ ಬೈಬಲ್

ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ

Cross references

ಆದಿಕಾಂಡ 14:19

ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.

ಆದಿಕಾಂಡ 20:7

ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.

ಆದಿಕಾಂಡ 47:7

ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು.

ಆದಿಕಾಂಡ 47:10

ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.

ಲೇವ್ಯಕಾಂಡ 1:3

ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.

ಅಂಕೆಗಳ ಪುಸ್ತಕ 6:23

ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು.

ಯೆಹೋಶುವ 22:6

ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು.

2 ಸಮುವೇಲ 6:18

ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ

1 ಅರಸುಗಳು 8:55

ಆಗ ಅವನು ಮಹಾ ಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಭೆಯನ್ನು ಆಶೀರ್ವದಿಸಿ--ತನ್ನ ಜನರಾದ ಇಸ್ರಾಯೇಲ್ಯರಿಗೆ ತಾನು ಮಾತು ಕೊಟ್ಟ ಎಲ್ಲಾದರ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಕರ್ತನು ಸ್ತುತಿಸ ಲ್ಪಡಲಿ.

2 ದಿನವೃತ್ತಾಂತ 29:29

ಅವರು ಅರ್ಪಿಸುವದು ತೀರಿದಾಗ ಅರಸನೂ ಅವನ ಸಂಗಡ ಇದ್ದವರೆಲ್ಲರೂ ಬೊಗ್ಗಿ ಆರಾಧಿಸಿ ದರು.

2 ದಿನವೃತ್ತಾಂತ 30:18

ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್‌, ಮನಸ್ಸೆ, ಇಸ್ಸಾಕಾರ್‌, ಜೆಬುಲೂನ್‌ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.

2 ದಿನವೃತ್ತಾಂತ 30:27

ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.

ಲೂಕ 24:50

ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.

ಹೆಬ್ರಿಯರಿಗೆ 7:7

ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.

Interlinear

Choose Theme