Home Bibles 1 ದಿನವೃತ್ತಾಂತ 16:41 · ಕನ್ನಡ ಬೈಬಲ್
1 ದಿನವೃತ್ತಾಂತ 16:41 · ಕನ್ನಡ ಬೈಬಲ್

ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.

Cross references

ಅಂಕೆಗಳ ಪುಸ್ತಕ 1:17

ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು.

1 ದಿನವೃತ್ತಾಂತ 6:33

ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,

1 ದಿನವೃತ್ತಾಂತ 6:39

ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,

1 ದಿನವೃತ್ತಾಂತ 12:31

ಮನಸ್ಸೆಯ ಅರ್ಧಗೋತ್ರದಲ್ಲಿ ಹದಿ ನೆಂಟು ಸಾವಿರ ಮಂದಿ. ಅವರು ದಾವೀದನನ್ನು ಅರಸನಾಗ ಮಾಡಲು ಬಂದ ಹೆಸರು ಹೆಸರಾಗಿ ಹೇಳಲು ನೇಮಿಸಲ್ಪಟ್ಟವರು.

1 ದಿನವೃತ್ತಾಂತ 15:17

ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.

1 ದಿನವೃತ್ತಾಂತ 16:34

ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.

1 ದಿನವೃತ್ತಾಂತ 16:37

ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;

1 ದಿನವೃತ್ತಾಂತ 25:1

ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್‌ ಹೇಮಾನ್‌ ಯೆದುತೂನ್‌ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು.

1 ದಿನವೃತ್ತಾಂತ 25:3

ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.

2 ದಿನವೃತ್ತಾಂತ 5:13

ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.

2 ದಿನವೃತ್ತಾಂತ 7:3

ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.

2 ದಿನವೃತ್ತಾಂತ 20:21

ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.

ಎಜ್ರಾ 3:11

ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.

ಎಜ್ರಾ 8:20

ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು.

ಕೀರ್ತನೆಗಳು 103:17

ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ

ಯೆರೆಮಿಯ 33:11

ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.

ಲೂಕ 1:50

ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.

Interlinear

Choose Theme