ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು.
Cross references
ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ.
ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು.
ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.
ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.
ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು.
ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.