ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
Cross references
ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.
ನಿಶ್ಚಯವಾಗಿ ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನಮಾಡಿದಂತೆ ನಿನ್ನನ್ನು ಆಶೀರ್ವದಿಸುವನು; ನೀನು ಸಾಲ ತೆಗೆದು ಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲಕೊಡುವಿ. ಅನೇಕ ಜನಾಂಗಗಳನ್ನು ಆಳುವಿ, ಅವರು ನಿನ್ನನ್ನು ಆಳುವದಿಲ್ಲ.
ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
ಆದರೆ ಅರಸನಾದ ಸೊಲೊಮೋನನು ಆಶೀರ್ವದಿಸಲ್ಪಡುವನು; ದಾವೀ ದನ ಸಿಂಹಾಸನವು ಕರ್ತನ ಮುಂದೆ ಯುಗ ಯುಗಾಂತರಕ್ಕೂ ಸ್ಥಿರವಾಗಿರುವದು ಅಂದನು.ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.