Home Bibles 1 ದಿನವೃತ್ತಾಂತ 18:17 · ಕನ್ನಡ ಬೈಬಲ್
1 ದಿನವೃತ್ತಾಂತ 18:17 · ಕನ್ನಡ ಬೈಬಲ್

ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.

Cross references

2 ಸಮುವೇಲ 8:18

ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.

2 ಸಮುವೇಲ 15:18

ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್‌ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.

2 ಸಮುವೇಲ 20:7

ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.

2 ಸಮುವೇಲ 20:23

ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;

2 ಸಮುವೇಲ 23:19

ಈ ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಆ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ.

1 ಅರಸುಗಳು 1:38

ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.

1 ಅರಸುಗಳು 1:44

ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.

1 ಅರಸುಗಳು 2:34

ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.

1 ದಿನವೃತ್ತಾಂತ 23:28

ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ

ಸೆಫನ್ಯ 2:5

ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.

Interlinear

Choose Theme