ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.
Cross references
ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್‌ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ.
ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು.
ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.
ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.
ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ.