Home Bibles 1 ದಿನವೃತ್ತಾಂತ 18:8 · ಕನ್ನಡ ಬೈಬಲ್
1 ದಿನವೃತ್ತಾಂತ 18:8 · ಕನ್ನಡ ಬೈಬಲ್

ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು.

Cross references

2 ಸಮುವೇಲ 8:8

ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು.

1 ಅರಸುಗಳು 7:15

ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು.

1 ದಿನವೃತ್ತಾಂತ 22:14

ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.

2 ದಿನವೃತ್ತಾಂತ 3:15

ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.

2 ದಿನವೃತ್ತಾಂತ 4:2

ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.

2 ದಿನವೃತ್ತಾಂತ 4:12

ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ

2 ದಿನವೃತ್ತಾಂತ 4:16

ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು.

Interlinear

Choose Theme