Home Bibles 1 ದಿನವೃತ್ತಾಂತ 19:3 · ಕನ್ನಡ ಬೈಬಲ್
1 ದಿನವೃತ್ತಾಂತ 19:3 · ಕನ್ನಡ ಬೈಬಲ್

ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು.

Cross references

ಆದಿಕಾಂಡ 42:9

ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.

ಯೆಹೋಶುವ 2:1

ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.

ನ್ಯಾಯಾಧಿಪತಿಗಳು 1:23

ಆದರೆ ಮೊದಲು ಲೂಜ್‌ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಪಾಳತಿ ನೋಡಲು ಯೋಸೇಫನ ಮನೆಯವರು ಕಳುಹಿಸಿದರು.

ನ್ಯಾಯಾಧಿಪತಿಗಳು 18:2

ಅವರು ದೇಶವನ್ನು ಪಾಳತಿ ನೋಡಿ ಶೋಧಿಸುವದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿ ಯನ್ನು ಕರೆದು ಅವರಿಗೆ--ನೀವು ಹೋಗಿ ದೇಶವನ್ನು ಶೋಧಿಸಿರಿ ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯಾಮ್‌ ಬೆಟ್ಟದಲ್ಲಿರುವ ವಿಾಕನ ಮನೆಯ ಬಳಿಗೆ ಬಂದು ಅಲ್ಲಿ ಇಳುಕೊಂಡರು.

ನ್ಯಾಯಾಧಿಪತಿಗಳು 18:8

ಅವರು ಚೊರ್ಗಾದಲ್ಲಿಯೂ ಎಷ್ಟಾ ವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರಿಗಿ ಬಂದರು. ಅವರ ಸಹೋದರರು ಅವರಿಗೆ--ನೀವು ಏನು ಹೇಳುತ್ತೀರಿ? ಅಂದರು.

1 ಸಮುವೇಲ 29:4

ಆದರೆ ಫಿಲಿಷ್ಟಿಯರ ಅಧಿಪತಿಗಳು ಅವನ ಮೇಲೆ ರೌದ್ರವಾಗಿ ಅವನಿಗೆ--ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದ ಹಾಗೆ ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ ನೀನು ಅವನಿಗೆ ನೇಮಿಸಿದ ತನ್ನ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವನನ್ನು ಕಳುಹಿಸಿಬಿಡು. ಇವನು ಯಾತರಿಂದ ತನ್ನ ದೊರೆಗೆ ತನ್ನನ್ನು ಇಷ್ಟನಾಗ ಮಾಡಿಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?

1 ಸಮುವೇಲ 29:9

ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.

1 ಅರಸುಗಳು 12:8

ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.

1 ಕೊರಿಂಥದವರಿಗೆ 13:5

ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.

Interlinear

Choose Theme