ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ
Cross references
ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು.
ಆಗ ಇಷಯನು ಅಬೀನಾ ದಾಬನನ್ನು ಕರೆದು ಅವನನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.
ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು.
ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.
ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು.
ಇವನು ಸಹ ಮಹಾ ಶರೀರ ದವನಾದ ರೆಫಾಯನ ಮಗನಾಗಿದ್ದನು. ಇವನು ಇಸ್ರಾ ಯೇಲನ್ನು ನಿಂದಿಸಿದಾಗ ದಾವೀದನ ಸಹೋದರನಾದ ಶಿಮ್ಮನ ಮಗನಾಗಿರುವ ಯೋನಾತಾನನು ಅವನನ್ನು ಕೊಂದುಬಿಟ್ಟನು.ಇವರು ಗತ್‌ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು.
ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು;