ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.
Cross references
ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ನೋಡಿ ಅವಳನ್ನು ತಕ್ಕೊಂಡು ಅವಳನ್ನು ಕೂಡಿದನು.
ಅವಳು ಗರ್ಭಿಣಿ ಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ ಎಂದು ಹೆಸರಿಟ್ಟನು.
ಆಕೆಯು ತಿರಿಗಿ ಗರ್ಭಿಣಿ ಯಾಗಿ ಮಗನನ್ನು ಹೆತ್ತು ಅವನಿಗೆ ಓನಾನ ಎಂದು ಹೆಸರಿಟ್ಟಳು.
ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು.
ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.
ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
ಯೆಹೂದನ ಮಗನಾದ ಶೇಲನ ಕುಮಾರರು --ಲೇಕಾಹ್ಯದ ತಂದೆಯಾದ ಏರನು, ಮರೇಷದ ತಂದೆಯಾದ ಲದ್ದನು, ಬೇತಪ್ಬೇವನ ಮನೆಯವರಾಗಿ ರುವ ನಾರುಗಳಿಂದ ನಯವಾದ ಕೆಲಸಮಾಡಿದವರ ಮನೆಯ ಸಂತತಿಗಳು.
ಶೇಲಾಹನ ಚೊಚ್ಚಲ ಮಗನಾದ ಅಸಾಯನು;