1 ದಿನವೃತ್ತಾಂತ 2:6 · ಕನ್ನಡ ಬೈಬಲ್
ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ.
Cross references
ಯೆಹೋಶುವ 7:1
ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
ಯೆಹೋಶುವ 7:17
ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು.
1 ಅರಸುಗಳು 4:31
ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು.
1 ಅರಸುಗಳು 5:11
ಸೊಲೊ ಮೋನನು ಹೀರಾಮನಿಗೆ ಅವನ ಮನೆಯವರ ಆಹಾರ ಕ್ಕೋಸ್ಕರ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಅಳತೆ ಶುದ್ಧವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.