Home Bibles 1 ದಿನವೃತ್ತಾಂತ 21:12 · ಕನ್ನಡ ಬೈಬಲ್
1 ದಿನವೃತ್ತಾಂತ 21:12 · ಕನ್ನಡ ಬೈಬಲ್

ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು.

Cross references

ನಿರ್ಗಮಕಾಂಡ 12:23

ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.

ಲೇವ್ಯಕಾಂಡ 26:10

ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.

ಲೇವ್ಯಕಾಂಡ 26:17

ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.

ಲೇವ್ಯಕಾಂಡ 26:25

ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.

ಲೇವ್ಯಕಾಂಡ 26:36

ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.

ದ್ವಿತೀಯೋಪದೇಶಕಾಂಡ 28:15

ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.

ದ್ವಿತೀಯೋಪದೇಶಕಾಂಡ 28:22

ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.

ದ್ವಿತೀಯೋಪದೇಶಕಾಂಡ 28:25

ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.

ದ್ವಿತೀಯೋಪದೇಶಕಾಂಡ 28:27

ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.

ದ್ವಿತೀಯೋಪದೇಶಕಾಂಡ 28:35

ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು.

ದ್ವಿತೀಯೋಪದೇಶಕಾಂಡ 28:51

ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.

2 ಸಮುವೇಲ 21:1

ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.

2 ಸಮುವೇಲ 24:13

ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.

1 ಅರಸುಗಳು 17:1

ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.

2 ಅರಸುಗಳು 8:1

ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.

2 ಅರಸುಗಳು 19:35

ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.

1 ದಿನವೃತ್ತಾಂತ 21:15

ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.

ಕೀರ್ತನೆಗಳು 91:6

ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.

ಯೆಶಾಯ 66:16

ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.

ಯೆರೆಮಿಯ 12:12

ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು.

ಯೆರೆಮಿಯ 47:6

ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.

ವಿಲಾಪಗಳು 4:9

ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.

ಯೆಹೆಜ್ಕೇಲ 14:19

ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,

ಮತ್ತಾಯ 13:49

ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.

ಲೂಕ 4:25

ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ

ಅಪೋಸ್ತಲರ ಕೃತ್ಯಗಳು 12:23

ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.

ಪ್ರಕಟನೆ 7:1

ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.

Interlinear

Choose Theme