ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು.
Cross references
ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.
ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.
ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
ಅದಕ್ಕೆ ದಾವೀ ದನು--ಈ ಬಾಧೆಯು ಜನರ ಕಡೆಯಿಂದ ತಡೆ ಯಲ್ಪಡುವ ಹಾಗೆ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸುವದಕ್ಕೆ ಈ ಕಣವನ್ನು ನಿನ್ನಿಂದ ಕೊಂಡು ಕೊಳ್ಳಲು ಬಂದಿದ್ದೇನೆ ಅಂದನು.
ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು.