ಒರ್ನಾನನು ದಾವೀದನಿಗೆ--ನಿನಗಾಗಿ ತಕ್ಕೋ; ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ಇಗೋ, ದಹನಬಲಿಗೋಸ್ಕರ ಎತ್ತುಗಳನ್ನೂ ಕಟ್ಟಿಗೆಗಳಿ ಗೋಸ್ಕರ ಹಂತಿಯ ಬಾತಿಮುಟ್ಟುಗಳನ್ನೂ ಆಹಾರದ ಅರ್ಪಣೆಗೋಸ್ಕರ ಗೋಧಿಯನ್ನೂ ಕೊಡುವದ ಲ್ಲದೆ ಸಮಸ್ತವನ್ನೂ ಕೊಡುವೆನು ಅಂದನು.
Cross references
ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು.
ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು.
ಅರೌನನು ದಾವೀದನಿಗೆ--ಅರಸನಾದ ನನ್ನ ಒಡೆಯನು ಅದನ್ನು ತಕ್ಕೊಂಡು ತನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅರ್ಪಿಸಲಿ; ಇಗೋ, ದಹನಬಲಿಗೋಸ್ಕರ ಎತ್ತು ಗಳೂ ಕಟ್ಟಿಗೆಗಳಿಗೋಸ್ಕರ ಹಂತಿ ದೂಡುವ ಸಾಮಾನೂ ಬಾತಿ ಮುಟ್ಟುಗಳೂ ಇಲ್ಲಿ ಅವೆ ಅಂದನು.
ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.
ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.