Home Bibles 1 ದಿನವೃತ್ತಾಂತ 21:30 · ಕನ್ನಡ ಬೈಬಲ್
1 ದಿನವೃತ್ತಾಂತ 21:30 · ಕನ್ನಡ ಬೈಬಲ್

ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.

Cross references

ದ್ವಿತೀಯೋಪದೇಶಕಾಂಡ 10:12

ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ

2 ಸಮುವೇಲ 6:9

ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು.

1 ದಿನವೃತ್ತಾಂತ 13:12

ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.

1 ದಿನವೃತ್ತಾಂತ 21:16

ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.

ಯೋಬ 13:21

ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.

ಯೋಬ 21:6

ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.

ಯೋಬ 23:15

ಆದದರಿಂದ ಆತನ ಮುಂದೆ ತಲ್ಲಣಪಡುತ್ತೇನೆ; ಗ್ರಹಿಸಿಕೊಂಡು ಆತನಿಗೆ ಭಯ ಪಡುತ್ತೇನೆ.

ಕೀರ್ತನೆಗಳು 90:11

ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.

ಕೀರ್ತನೆಗಳು 119:120

ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.

ಯೆರೆಮಿಯ 5:22

ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.

ಯೆರೆಮಿಯ 10:7

ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,

ಹೆಬ್ರಿಯರಿಗೆ 12:28

ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.

ಪ್ರಕಟನೆ 1:17

ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.

ಪ್ರಕಟನೆ 15:4

ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.

Interlinear

Choose Theme