ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.
Cross references
ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ.
ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು
ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.
ಲೇವಿಯ ಕುಮಾರರನ್ನು ಅವರ ತಂದೆಗಳ ಮನೆಯ ಪ್ರಕಾರ ವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸು. ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು ಅಂದನು.
ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ.
ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು.
ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
ಆಗ ಮೋಶೆಯೂ ಆರೋನನೂ ಸಭೆಯ ಮುಖ್ಯಸ್ಥರೂ ಕೆಹಾತಿಯರ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು.
ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.
ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.
ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.
ಹಾಗೆಯೇ ಇಪ್ಪತ್ತು ವರುಷ ಪ್ರಾಯ ಮೊದಲು ಗೊಂಡು ಅವರ ತಂದೆಗಳ ಮನೆಯ ಹಾಗೆ ಬರೆಯ ಲ್ಪಟ್ಟ ಅವರವರ ಕೆಲಸಗಳಲ್ಲಿಯೂ ಅವರವರ ಸರತಿ ಗಳಲ್ಲಿಯೂ ಇರುವ ಯಾಜಕರಿಗೂ ಲೇವಿಯ ರಿಗೂ
ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.
ನಾನು ಗೋಡೆಯನ್ನು ಕಟ್ಟಿಸಿ ಬಾಗಲುಗಳನ್ನು ನಿಲ್ಲಿಸಿದ ತರುವಾಯ ಬಾಗಲು ಕಾಯುವವರೂ ಹಾಡುಗಾರರೂ ಲೇವಿಯರೂ ನೇಮಿಸಲ್ಪಟ್ಟರು.