Home Bibles 1 ದಿನವೃತ್ತಾಂತ 24:19 · ಕನ್ನಡ ಬೈಬಲ್
1 ದಿನವೃತ್ತಾಂತ 24:19 · ಕನ್ನಡ ಬೈಬಲ್

ಇವೇ ಇಸ್ರಾಯೇಲ್‌ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.

Cross references

1 ದಿನವೃತ್ತಾಂತ 6:34

ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,

1 ದಿನವೃತ್ತಾಂತ 9:25

ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು

1 ದಿನವೃತ್ತಾಂತ 24:1

ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;

2 ದಿನವೃತ್ತಾಂತ 23:4

ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.

2 ದಿನವೃತ್ತಾಂತ 23:8

ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.

1 ಕೊರಿಂಥದವರಿಗೆ 14:40

ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.

ಹೆಬ್ರಿಯರಿಗೆ 7:11

ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).

Interlinear

Choose Theme