ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.
Cross references
ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.
ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.
ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.
ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು.
ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.