ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
Cross references
ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು;
ಅಹೀಟೂಬನ ಮಗನಾದ ಚಾದೋ ಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು.ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.
ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು.
ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು.
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ --