Home Bibles ☰ Books 1 ದಿನವೃತ್ತಾಂತ 25:3 · ಕನ್ನಡ ಬೈಬಲ್
1 ದಿನವೃತ್ತಾಂತ 25:3 · ಕನ್ನಡ ಬೈಬಲ್

ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.

Cross references

1 ಸಮುವೇಲ 10:5

ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.

1 ದಿನವೃತ್ತಾಂತ 9:16

ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು.

1 ದಿನವೃತ್ತಾಂತ 15:18

ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್‌ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.

1 ದಿನವೃತ್ತಾಂತ 15:21

ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು.

1 ದಿನವೃತ್ತಾಂತ 16:41

ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.

1 ದಿನವೃತ್ತಾಂತ 25:21

ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

2 ದಿನವೃತ್ತಾಂತ 29:14

ಜೆಕರ್ಯನೂ ಮತ್ತನ್ಯನೂ ಹೆಮಾನನ ಮಕ್ಕಳಲ್ಲಿ ಯೆಹೀಯೇಲನೂ ಶಿಮ್ಮನೂ ಯೆದುತೂನನ ಮಕ್ಕಳಲ್ಲಿ ಶೆಮಾಯನೂ ಉಜ್ಜೀಯೇಲನೂ ಎದ್ದರು.

ಕೀರ್ತನೆಗಳು 92:1

ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ

ಯೆರೆಮಿಯ 33:11

ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.

Interlinear

Choose Theme