ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.
Cross references
ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.
ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.
ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು.
ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು.
ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.