Home Bibles 1 ದಿನವೃತ್ತಾಂತ 27:25 · ಕನ್ನಡ ಬೈಬಲ್
1 ದಿನವೃತ್ತಾಂತ 27:25 · ಕನ್ನಡ ಬೈಬಲ್

ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು.

Cross references

ಆದಿಕಾಂಡ 41:48

ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.

ನಿರ್ಗಮಕಾಂಡ 1:11

ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್‌ ರಾಮ್ಸೇಸ್‌ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

2 ಸಮುವೇಲ 23:31

ಪಿತೋನ್ಯ ನಾದ ಬೆನಾಯನು, ನಹಲೇ ಗಾಷ್‌ ಊರಿನವನಾದ ಹಿದೈ ಅರಾಬಾದ ಅಬೀಅಲ್ಬೋನ್‌, ಬರ್ಹುಮ್ಯನಾದ ಅಜ್ಮಾವೇತನು, ಶಾಲ್ಬೋನ್ಯನಾದ ಎಲೆಯಖ್ಬಾ

2 ಅರಸುಗಳು 18:15

ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು.

1 ದಿನವೃತ್ತಾಂತ 28:1

ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು.

2 ದಿನವೃತ್ತಾಂತ 16:2

ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.

2 ದಿನವೃತ್ತಾಂತ 26:10

ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.

ಯೆರೆಮಿಯ 41:8

ಆಗ ಅವನು ಕಾರೇಹನ ಮಗನಾದ ಯೋಹಾನಾನನ್ನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ಕಿರಿಯರು ಮೊದಲುಗೊಂಡು ಹಿರಿಯರ ವರೆಗೆ ಜನರೆಲ್ಲರನ್ನೂ

Interlinear

Choose Theme