Home Bibles 1 ದಿನವೃತ್ತಾಂತ 27:32 · ಕನ್ನಡ ಬೈಬಲ್
1 ದಿನವೃತ್ತಾಂತ 27:32 · ಕನ್ನಡ ಬೈಬಲ್

ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು.

Cross references

2 ಸಮುವೇಲ 13:3

ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು.

2 ಸಮುವೇಲ 21:21

ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.ಈ ನಾಲ್ಕು ಮಂದಿಯು ಗತ್‌ ಊರಿನಲ್ಲಿದ್ದ ಮಹಾಶರೀರದವನಿಗೆ ಹುಟ್ಟಿದ್ದರು; ಇವರು ದಾವೀದ ನಿಂದಲೂ ಅವನ ಸೇವಕರಿಂದಲೂ ಸಂಹಾರವಾದರು.

1 ದಿನವೃತ್ತಾಂತ 11:11

ದಾವೀದನ ಸಂಗಡ ಇದ್ದ ಪರಾಕ್ರಮಶಾಲಿಗಳ ಲೆಕ್ಕವೇನಂದರೆ--ಹಕ್ಮೋನಿಯನಾದ ಯಾಷೊಬ್ಬಾ ಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು; ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿ ಯನ್ನು ಎತ್ತಿ ಒಂದೇ ಸಾರಿ ಅವರನ್ನು ಕೊಂದು ಹಾಕಿದನು.

1 ದಿನವೃತ್ತಾಂತ 20:7

ಇವನು ಸಹ ಮಹಾ ಶರೀರ ದವನಾದ ರೆಫಾಯನ ಮಗನಾಗಿದ್ದನು. ಇವನು ಇಸ್ರಾ ಯೇಲನ್ನು ನಿಂದಿಸಿದಾಗ ದಾವೀದನ ಸಹೋದರನಾದ ಶಿಮ್ಮನ ಮಗನಾಗಿರುವ ಯೋನಾತಾನನು ಅವನನ್ನು ಕೊಂದುಬಿಟ್ಟನು.ಇವರು ಗತ್‌ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು.

Interlinear

Choose Theme