1 ದಿನವೃತ್ತಾಂತ 27:4 · ಕನ್ನಡ ಬೈಬಲ್
ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Cross references
2 ಸಮುವೇಲ 23:9
ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.
1 ದಿನವೃತ್ತಾಂತ 11:12
ಅವನ ತರುವಾಯ ಅಹೋಹ್ಯನಾ ದಂಥ ದೋದೋನ ಮಗನಾದಂಥ ಎಲ್ಲಾಜಾರನು ಮೂರು ಮಂದಿ ಪರಾಕ್ರಮಾಶಾಲಿಗಳಲ್ಲಿ ಒಬ್ಬನಾ ಗಿದ್ದನು.