1 ದಿನವೃತ್ತಾಂತ 28:16 · ಕನ್ನಡ ಬೈಬಲ್
ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು.
Cross references
ನಿರ್ಗಮಕಾಂಡ 25:23
ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು.
1 ಅರಸುಗಳು 7:48
ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
2 ದಿನವೃತ್ತಾಂತ 4:8
ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
2 ದಿನವೃತ್ತಾಂತ 4:19
ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ