ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.
Cross references
ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು.
ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು.
ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು.
ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.
ಇಸ್ರಾಯೇಲ್ಯರೆಲ್ಲರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಕೂಡಿಬಂದು ಹೇಳಿ ದ್ದೇನಂದರೆ--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.
ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು.
ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.
ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.
ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ
ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ.
ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--