ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.
Cross references
ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
ಭೂಮಿಯಲ್ಲಿರುವವರೆಲ್ಲರೂ ಹೋಗುವ ಮಾರ್ಗ ವಾಗಿ ನಾನೂ ಹೋಗುತ್ತೇನೆ; ನೀನು ಬಲಗೊಂಡು ಶೂರನಾಗಿರು.
ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.
ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ,
ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.
ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ
ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
ಆದಕಾರಣ ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷನಾದ ಇಸ್ರಾಯೇಲಿನ ದೇವರಾದ ಕರ್ತನ ಕಡೆಯಿಂದ ಅವನ ಹೃದಯವು ತಿರುಗಿಹೋದದರಿಂದ ಕರ್ತನು ಅವನ ಮೇಲೆ ಕೋಪಿಸಿಕೊಂಡಿದ್ದನು.
ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.