Home Bibles ☰ Books 1 ದಿನವೃತ್ತಾಂತ 29:9 · ಕನ್ನಡ ಬೈಬಲ್
1 ದಿನವೃತ್ತಾಂತ 29:9 · ಕನ್ನಡ ಬೈಬಲ್

ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.

Cross references

ದ್ವಿತೀಯೋಪದೇಶಕಾಂಡ 16:10

ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.

ನ್ಯಾಯಾಧಿಪತಿಗಳು 5:9

ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.

1 ಅರಸುಗಳು 8:61

ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.

2 ಅರಸುಗಳು 12:5

ಯಾಜಕರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪರಿಚಯ ದವರಿಂದ ತಕ್ಕೊಂಡು ಆಲಯದಲ್ಲಿ ಕಂಡುಬರುವ ಒಡಕುಗಳನ್ನೆಲ್ಲಾ ದುರಸ್ತುಮಾಡಲಿ ಅಂದನು.

1 ದಿನವೃತ್ತಾಂತ 29:17

ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.

2 ದಿನವೃತ್ತಾಂತ 24:10

ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು.

2 ದಿನವೃತ್ತಾಂತ 31:8

ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು.

ಎಜ್ರಾ 1:6

ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.

ಕೀರ್ತನೆಗಳು 110:3

ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.

ಸಾಮೇತಿಗಳು 23:15

ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು.

ಲೂಕ 15:6

ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.

ಯೋಹಾನ 15:11

ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.

Interlinear

Choose Theme