Home Bibles 1 ದಿನವೃತ್ತಾಂತ 3:1 · ಕನ್ನಡ ಬೈಬಲ್
1 ದಿನವೃತ್ತಾಂತ 3:1 · ಕನ್ನಡ ಬೈಬಲ್

ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,

Cross references

ಯೆಹೋಶುವ 15:56

ಇಜ್ರೇಲ್‌, ಯೊಗ್ದೆಯಾಮ್‌, ಜನೋಹ,

1 ಸಮುವೇಲ 25:39

ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.

1 ಸಮುವೇಲ 27:3

ದಾವೀದನು ಗತ್‌ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.

2 ಸಮುವೇಲ 3:1

ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.

2 ಸಮುವೇಲ 3:2

ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ

2 ಸಮುವೇಲ 5:13

ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.

2 ಸಮುವೇಲ 13:1

ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.

2 ಸಮುವೇಲ 13:29

ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.

1 ದಿನವೃತ್ತಾಂತ 28:5

ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.

Interlinear

Choose Theme