Home Bibles 1 ದಿನವೃತ್ತಾಂತ 3:11 · ಕನ್ನಡ ಬೈಬಲ್
1 ದಿನವೃತ್ತಾಂತ 3:11 · ಕನ್ನಡ ಬೈಬಲ್

ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.

Cross references

1 ಅರಸುಗಳು 22:50

ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.

1 ಅರಸುಗಳು 22:51

ಅಹಾಬನ ಮಗನಾದ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆ ವರುಷ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾ ರಂಭಿಸಿ ಎರಡು ವರುಷ ಆಳಿದನು. ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನುಮಾಡಿ

2 ಅರಸುಗಳು 8:16

ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಐದನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಯೆಹೋಷಾಫಾ ಟನ ಮಗನಾದ ಯೆಹೋರಾಮನು ಆಳಲಾರಂಭಿಸಿ ದನು.

2 ಅರಸುಗಳು 8:24

ಯೆಹೋರಾಮನು ತನ್ನ ಪಿತೃಗಳ ಬಳಿಯಲ್ಲಿ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.

2 ಅರಸುಗಳು 8:25

ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಹನ್ನೆರಡನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಆಳಲಾರಂಭಿಸಿದನು.

2 ಅರಸುಗಳು 11:2

ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು.

2 ಅರಸುಗಳು 11:21

ಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು.

2 ಅರಸುಗಳು 12:1

ಯೇಹುವಿನ ಆಳ್ವಿಕೆಯ ಏಳನೇ ವರುಷದಲ್ಲಿ ಯೆಹೋವಾಷನು ಆಳಲು ಆರಂಭಿಸಿ ಯೆರೂಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು.

1 ದಿನವೃತ್ತಾಂತ 22:1

ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.

2 ದಿನವೃತ್ತಾಂತ 21:1

ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.

2 ದಿನವೃತ್ತಾಂತ 21:17

ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ಹೊಕ್ಕು ಅರಸನ ಮನೆಯಲ್ಲಿ ಸಿಕ್ಕಿದ ಸಮಸ್ತ ಆಸ್ತಿಯನ್ನೂ ಅವನ ಕುಮಾರರನ್ನೂ ಹೆಂಡತಿಯರನ್ನೂ ತಕ್ಕೊಂಡು ಹೋದರು. ಆದದರಿಂದ ಅವನ ಕುಮಾರರಲ್ಲಿ ಚಿಕ್ಕವ ನಾದ ಯೆಹೋವಾಹಾಜನು ಹೊರತು ಅವನಿಗೆ ಕುಮಾರರು ಯಾರೂ ಬಿಡಲ್ಪಡಲಿಲ್ಲ.

2 ದಿನವೃತ್ತಾಂತ 22:6

ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.

2 ದಿನವೃತ್ತಾಂತ 24:1

ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.

Interlinear

Choose Theme