Home Bibles 1 ದಿನವೃತ್ತಾಂತ 3:2 · ಕನ್ನಡ ಬೈಬಲ್
1 ದಿನವೃತ್ತಾಂತ 3:2 · ಕನ್ನಡ ಬೈಬಲ್

ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,

Cross references

ಯೆಹೋಶುವ 13:13

ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.

2 ಸಮುವೇಲ 3:4

ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ

2 ಸಮುವೇಲ 13:1

ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು.

2 ಸಮುವೇಲ 13:20

ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.

2 ಸಮುವೇಲ 13:38

ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.

2 ಸಮುವೇಲ 14:23

ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.

2 ಸಮುವೇಲ 14:32

ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.

2 ಸಮುವೇಲ 15:8

ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.

2 ಸಮುವೇಲ 18:14

ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.

2 ಸಮುವೇಲ 18:18

ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ಈ ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.

2 ಸಮುವೇಲ 18:33

ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.

2 ಸಮುವೇಲ 19:4

ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.

1 ಅರಸುಗಳು 1:5

ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.

1 ಅರಸುಗಳು 1:6

ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.

1 ಅರಸುಗಳು 2:24

ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.

1 ದಿನವೃತ್ತಾಂತ 2:23

ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.

Interlinear

Choose Theme