Home Bibles 1 ದಿನವೃತ್ತಾಂತ 4:43 · ಕನ್ನಡ ಬೈಬಲ್
1 ದಿನವೃತ್ತಾಂತ 4:43 · ಕನ್ನಡ ಬೈಬಲ್

ಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.

Cross references

ನಿರ್ಗಮಕಾಂಡ 17:14

ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.

ದ್ವಿತೀಯೋಪದೇಶಕಾಂಡ 25:17

ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ.

ದ್ವಿತೀಯೋಪದೇಶಕಾಂಡ 34:6

ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.

ನ್ಯಾಯಾಧಿಪತಿಗಳು 1:26

ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್‌ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು.

1 ಸಮುವೇಲ 15:7

ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.

1 ಸಮುವೇಲ 30:16

ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.

1 ಸಮುವೇಲ 30:17

ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.

2 ಸಮುವೇಲ 8:12

ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.

2 ದಿನವೃತ್ತಾಂತ 5:9

ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.

ಮತ್ತಾಯ 27:8

ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.

ಮತ್ತಾಯ 28:15

ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.

Interlinear

Choose Theme