Home Bibles 1 ದಿನವೃತ್ತಾಂತ 6:15 · ಕನ್ನಡ ಬೈಬಲ್
1 ದಿನವೃತ್ತಾಂತ 6:15 · ಕನ್ನಡ ಬೈಬಲ್

ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.

Cross references

ನಿರ್ಗಮಕಾಂಡ 4:13

ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.

2 ಅರಸುಗಳು 14:27

ಇದಲ್ಲದೆ ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿ ಬಿಡುವೆನೆಂದು ಕರ್ತನು ಹೇಳಿದ್ದಿಲ್ಲ; ಆದರೆ ಯೋವಾಷನ ಮಗನಾದ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದನು.

2 ಅರಸುಗಳು 25:18

ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.

2 ಅರಸುಗಳು 25:21

ಬಾಬೆಲಿನ ಅರಸನು ಹಮಾತ್‌ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.

2 ದಿನವೃತ್ತಾಂತ 36:17

ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.

ಎಜ್ರಾ 5:2

ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.

ಯೆರೆಮಿಯ 39:9

ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.

ಹಗ್ಗಾಯ 1:1

ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.

ಹಗ್ಗಾಯ 1:12

ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.

ಹಗ್ಗಾಯ 1:14

ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.

ಹಗ್ಗಾಯ 2:2

ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ--

ಅಪೋಸ್ತಲರ ಕೃತ್ಯಗಳು 14:27

ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.

ರೋಮಾಪುರದವರಿಗೆ 15:18

ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.

Interlinear

Choose Theme