ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,
Cross references
ಇದಲ್ಲದೆ ನನಗೆ ಯಾಜಕನ ಸೇವೆಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲಿಯೇಜರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ ಮಕ್ಕಳಿಂದ ನಿನ್ನ ಹತ್ತಿರ ಬರಮಾಡ ಬೇಕು.
ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.
ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು.
ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
ಎಫ್ರಾಯಾಮ್ ಬೆಟ್ಟದಲ್ಲಿರುವ ರಾಮಾತಯಿಮ್ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3
ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.
ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;
ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.
ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.