Home Bibles 1 ದಿನವೃತ್ತಾಂತ 7:27 · ಕನ್ನಡ ಬೈಬಲ್
1 ದಿನವೃತ್ತಾಂತ 7:27 · ಕನ್ನಡ ಬೈಬಲ್

ಇವನ ಮಗನು ನೋನನು, ಇವನ ಮಗನು ಯೆಹೋಷುವನು.

Cross references

ನಿರ್ಗಮಕಾಂಡ 17:9

ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.

ನಿರ್ಗಮಕಾಂಡ 24:13

ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.

ನಿರ್ಗಮಕಾಂಡ 32:17

ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.

ಅಂಕೆಗಳ ಪುಸ್ತಕ 11:28

ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು.

ಅಂಕೆಗಳ ಪುಸ್ತಕ 13:8

ಎಫ್ರಾಯಾಮ್‌ ಗೋತ್ರದ ನೂನನ ಮಗನಾದ ಹೋಶೇಯನು,

ಅಂಕೆಗಳ ಪುಸ್ತಕ 13:16

ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.

ಅಂಕೆಗಳ ಪುಸ್ತಕ 14:6

ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು

ಅಂಕೆಗಳ ಪುಸ್ತಕ 27:18

ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು

ದ್ವಿತೀಯೋಪದೇಶಕಾಂಡ 31:23

ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್‌ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.

ಅಪೋಸ್ತಲರ ಕೃತ್ಯಗಳು 7:45

ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.

ಹೆಬ್ರಿಯರಿಗೆ 4:8

ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.

Interlinear

Choose Theme