Home Bibles 1 ದಿನವೃತ್ತಾಂತ 7:29 · ಕನ್ನಡ ಬೈಬಲ್
1 ದಿನವೃತ್ತಾಂತ 7:29 · ಕನ್ನಡ ಬೈಬಲ್

ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು.

Cross references

ಯೆಹೋಶುವ 16:1

ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ

ಯೆಹೋಶುವ 17:7

ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು.

ಯೆಹೋಶುವ 17:11

ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್‌ಷೆ ಯಾನ್‌ ಇಬ್ಲೆಯಾಮ್‌ ದೋರ್‌ ಎಂದೋರ್‌ ತಾನಕ್‌ ಮೆಗಿದ್ದೋನ್‌ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.

ನ್ಯಾಯಾಧಿಪತಿಗಳು 1:22

ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು.

ನ್ಯಾಯಾಧಿಪತಿಗಳು 5:19

ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.

1 ಸಮುವೇಲ 31:10

ಅವನ ಆಯುಧಗಳನ್ನು ಅಷ್ಟೋರೆತ್‌ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,

1 ಅರಸುಗಳು 4:12

ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್‌ಷೆ ಯಾನ್‌; ಬೇತ್‌ಷೆಯಾನ್‌ ಮೊದಲುಗೊಂಡು ಅಬೇಲ್‌ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.

1 ಅರಸುಗಳು 9:15

ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.

2 ಅರಸುಗಳು 9:27

ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್‌ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.

2 ಅರಸುಗಳು 23:29

ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್‌ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.

2 ದಿನವೃತ್ತಾಂತ 35:22

ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.

ಜೆಕರ್ಯ 12:11

ಮೆಗಿದ್ದೋವಿನ ತಗ್ಗಿನಲ್ಲಾದ ಹದದ್‌ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.

ಪ್ರಕಟನೆ 16:16

ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್‌ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.

Interlinear

Choose Theme