ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Cross references
ಇವರು ಗಿಲ್ಯಾದ್ ದೇಶದಲ್ಲಿ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಬಂದು ಅವರ ಸಂಗಡ ಮಾತನಾಡಿ
ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು.
ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.
ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.
ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು;
ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು.
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ.
ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಹೇಗಂದರೆ ಮೊದಲನೆಯದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ.
ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.
ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.
ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯ ವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ--
ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.