Home Bibles ☰ Books 1 ಕೊರಿಂಥದವರಿಗೆ 1:13 · ಕನ್ನಡ ಬೈಬಲ್
1 ಕೊರಿಂಥದವರಿಗೆ 1:13 · ಕನ್ನಡ ಬೈಬಲ್

ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?

Cross references

ಮತ್ತಾಯ 28:19

ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

ಅಪೋಸ್ತಲರ ಕೃತ್ಯಗಳು 2:38

ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ಅಪೋಸ್ತಲರ ಕೃತ್ಯಗಳು 8:16

(ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).

ಅಪೋಸ್ತಲರ ಕೃತ್ಯಗಳು 10:48

ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.

ಅಪೋಸ್ತಲರ ಕೃತ್ಯಗಳು 19:5

ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.

ರೋಮಾಪುರದವರಿಗೆ 14:9

ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.

1 ಕೊರಿಂಥದವರಿಗೆ 1:15

ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು.

1 ಕೊರಿಂಥದವರಿಗೆ 6:19

ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.

1 ಕೊರಿಂಥದವರಿಗೆ 10:2

ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;

2 ಕೊರಿಂಥದವರಿಗೆ 5:14

ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.

2 ಕೊರಿಂಥದವರಿಗೆ 11:4

ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.

ಗಲಾತ್ಯದವರಿಗೆ 1:7

ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.

Interlinear

Choose Theme