Home Bibles 1 ಕೊರಿಂಥದವರಿಗೆ 12:25 · ಕನ್ನಡ ಬೈಬಲ್
1 ಕೊರಿಂಥದವರಿಗೆ 12:25 · ಕನ್ನಡ ಬೈಬಲ್

ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ.

Cross references

ಯೋಹಾನ 17:21

ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.

1 ಕೊರಿಂಥದವರಿಗೆ 1:10

ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

1 ಕೊರಿಂಥದವರಿಗೆ 3:3

ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?

2 ಕೊರಿಂಥದವರಿಗೆ 7:12

ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.

2 ಕೊರಿಂಥದವರಿಗೆ 8:16

ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.

2 ಕೊರಿಂಥದವರಿಗೆ 13:11

ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.

Interlinear

Choose Theme