Home Bibles 1 ಕೊರಿಂಥದವರಿಗೆ 12:28 · ಕನ್ನಡ ಬೈಬಲ್
1 ಕೊರಿಂಥದವರಿಗೆ 12:28 · ಕನ್ನಡ ಬೈಬಲ್

ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ

Cross references

ಅಂಕೆಗಳ ಪುಸ್ತಕ 11:17

ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.

ಲೂಕ 6:14

ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,

ಅಪೋಸ್ತಲರ ಕೃತ್ಯಗಳು 2:8

ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ?

ಅಪೋಸ್ತಲರ ಕೃತ್ಯಗಳು 13:1

ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.

ಅಪೋಸ್ತಲರ ಕೃತ್ಯಗಳು 20:28

ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

ರೋಮಾಪುರದವರಿಗೆ 12:6

ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.

1 ಕೊರಿಂಥದವರಿಗೆ 10:32

ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.

1 ಕೊರಿಂಥದವರಿಗೆ 12:7

ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.

1 ಕೊರಿಂಥದವರಿಗೆ 12:18

ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ.

ಎಫೆಸದವರಿಗೆ 2:20

ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;

ಎಫೆಸದವರಿಗೆ 3:5

ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.

ಎಫೆಸದವರಿಗೆ 4:11

ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ

1 ತಿಮೋಥೆಯ 5:17

ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.

ಹೆಬ್ರಿಯರಿಗೆ 13:17

ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.

ಹೆಬ್ರಿಯರಿಗೆ 13:24

ನಿಮ್ಮ ಸಭಾನಾಯಕರೆಲ್ಲರಿಗೆ ಮತ್ತು ಪರಿಶುದ್ಧರೆಲ್ಲರಿಗೆ ವಂದನೆ. ಇತಾಲ್ಯದವರು ನಿಮ್ಮನ್ನು ವಂದಿಸುತ್ತಾರೆ.ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.

1 ಪೇತ್ರ 5:1

ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,

Interlinear

Choose Theme