ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.
Cross references
ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ.
ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.
ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.